Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:7 - ಪರಿಶುದ್ದ ಬೈಬಲ್‌

7 ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:7
19 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


“ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.


ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.


ನಾನು ನನ್ನ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನ್ನು ತೋರಿಸಲು ನೀವು ನಿಮ್ಮ ಮೀಸೆಯನ್ನು ಮುಚ್ಚಿಕೊಳ್ಳುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನ್ನುವ ಆಹಾರವನ್ನು ನೀವು ತಿನ್ನುವುದಿಲ್ಲ.


ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.


ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.


ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.


(ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)


ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು