ಮೀಕ 4:1 - ಪರಿಶುದ್ದ ಬೈಬಲ್1 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.