Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:10 - ಪರಿಶುದ್ದ ಬೈಬಲ್‌

10 ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:10
27 ತಿಳಿವುಗಳ ಹೋಲಿಕೆ  

ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


“ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.


ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು!


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.


“ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.”


ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.


ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.


ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡ ತಂದು ಸುತ್ತಿಕೊಂಡ ನಡುಪಟ್ಟಿಯನ್ನು ತೆಗೆದುಕೊಂಡು ಪೆರಾತ್‌ಗೆ ಹೋಗು. ಆ ನಡುಪಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.”


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು