ಮೀಕ 4:11 - ಪರಿಶುದ್ದ ಬೈಬಲ್11 ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”