Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:2 - ಪರಿಶುದ್ದ ಬೈಬಲ್‌

2 ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:2
35 ತಿಳಿವುಗಳ ಹೋಲಿಕೆ  

ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.


ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ.


“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಬೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು