ಮೀಕ 4:4 - ಪರಿಶುದ್ದ ಬೈಬಲ್4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”
“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.