Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:5 - ಪರಿಶುದ್ದ ಬೈಬಲ್‌

5 ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:5
19 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯತನವನ್ನು ಕುರಿತು ಮಾತಾಡುತ್ತಲೇ ಇರುವೆನು.


“ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.


ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.


ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.


ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು