ಮೀಕ 4:6 - ಪರಿಶುದ್ದ ಬೈಬಲ್6 ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು ಒಂದಾಗಿ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ ಒಂದಾಗಿ ಸೇರಿಸುವೆನು. ಅಧ್ಯಾಯವನ್ನು ನೋಡಿ |