9 ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ?
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.
ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.
“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”
ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.
ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.