Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:1 - ಪರಿಶುದ್ದ ಬೈಬಲ್‌

1 ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:1
35 ತಿಳಿವುಗಳ ಹೋಲಿಕೆ  

ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.


ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.


ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.


ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.


ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.


ಜನಾಂಗದವರಿಗೆ ಇದನ್ನು ಪ್ರಕಟಿಸು: ಯುದ್ಧಕ್ಕೆ ತಯಾರಾಗಿರಿ! ಶೂರರನ್ನು ಎಚ್ಚರಿಸಿರಿ! ಯುದ್ಧ ವೀರರು ಹತ್ತಿರಕ್ಕೆ ಬರಲಿ; ಅವರು ಬರಲಿ!


“ನರಪುತ್ರನೇ, ಈವತ್ತಿನ ದಿವಸವನ್ನೂ ಸಂದೇಶವನ್ನೂ ಬರೆ: ‘ಈ ದಿವಸ ಬಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ.


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು