ಮೀಕ 5:12 - ಪರಿಶುದ್ದ ಬೈಬಲ್12 ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.