Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:6 - ಪರಿಶುದ್ದ ಬೈಬಲ್‌

6 ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:6
26 ತಿಳಿವುಗಳ ಹೋಲಿಕೆ  

ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.


ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.


ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು