ಮೀಕ 5:7 - ಪರಿಶುದ್ದ ಬೈಬಲ್7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.