ಮೀಕ 6:10 - ಪರಿಶುದ್ದ ಬೈಬಲ್10 ಕದ್ದುಕೊಂಡ ಭಂಡಾರಗಳನ್ನು ದುಷ್ಟರು ಇನ್ನೂ ಗುಪ್ತವಾಗಿಡುವರೋ? ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ ಜನರನ್ನು ಇನ್ನೂ ಮೋಸಪಡಿಸುವರೋ? ಹೌದು, ಅವೆಲ್ಲವೂ ನಡಿಯುತ್ತಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ; ಅಸಹ್ಯಕರವಾದ ಕಿರಿಯಳತೆ, ಇವು ಇನ್ನೂ ಸಿಕ್ಕುತ್ತಿವೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ? ಅಧ್ಯಾಯವನ್ನು ನೋಡಿ |
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”