ಮೀಕ 6:14 - ಪರಿಶುದ್ದ ಬೈಬಲ್14 ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿ |
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.