Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:15 - ಪರಿಶುದ್ದ ಬೈಬಲ್‌

15 ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:15
14 ತಿಳಿವುಗಳ ಹೋಲಿಕೆ  

ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು.


ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.


ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು