ಮೀಕ 6:16 - ಪರಿಶುದ್ದ ಬೈಬಲ್16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ. ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.