Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:2 - ಪರಿಶುದ್ದ ಬೈಬಲ್‌

2 ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:2
19 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು.


ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.


ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.


“ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.


ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.


ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ಎದ್ದುನಿಂತಿದ್ದಾನೆ.


ಯೆಹೋವನು ಹೇಳುವುದನ್ನು ಕೇಳಿರಿ: “ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.


ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು