ಮೀಕ 6:3 - ಪರಿಶುದ್ದ ಬೈಬಲ್3 ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ. ಅಧ್ಯಾಯವನ್ನು ನೋಡಿ |
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?