Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:4 - ಪರಿಶುದ್ದ ಬೈಬಲ್‌

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:4
29 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.


ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ:


ಆಗ ಸಮುವೇಲನು ಜನರಿಗೆ, “ಯೆಹೋವನೇ ಸಾಕ್ಷಿ. ಯೆಹೋವನು, ಮೋಶೆ ಆರೋನರನ್ನು ಆರಿಸಿಕೊಂಡನು. ಆತನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು