ಮೀಕ 6:5 - ಪರಿಶುದ್ದ ಬೈಬಲ್5 ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”