ಮೀಕ 6:8 - ಪರಿಶುದ್ದ ಬೈಬಲ್8 ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ? ಅಧ್ಯಾಯವನ್ನು ನೋಡಿ |
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.