Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:1 - ಪರಿಶುದ್ದ ಬೈಬಲ್‌

1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:1
14 ತಿಳಿವುಗಳ ಹೋಲಿಕೆ  

“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.


ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.


“ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.


‘“ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ.


ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.


ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು