ಮೀಕ 7:10 - ಪರಿಶುದ್ದ ಬೈಬಲ್10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿ |
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.