Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:11 - ಪರಿಶುದ್ದ ಬೈಬಲ್‌

11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:11
12 ತಿಳಿವುಗಳ ಹೋಲಿಕೆ  

ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.


ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.


ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


“ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು