ಮೀಕ 7:12 - ಪರಿಶುದ್ದ ಬೈಬಲ್12 ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ, ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು. ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿಬರುವರು; ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ, ಅಂತು ಐಗುಪ್ತದಿಂದ ಯೂಫ್ರೇಟೀಸ್ ನದಿಯವರೆಗೂ ಚದರಿರುವ ನಿನ್ನ ಸಕಲಜನರು ನಿನ್ನನ್ನು ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು. ಅಧ್ಯಾಯವನ್ನು ನೋಡಿ |