ಮೀಕ 7:13 - ಪರಿಶುದ್ದ ಬೈಬಲ್13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು. ಅಧ್ಯಾಯವನ್ನು ನೋಡಿ |
ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.