Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:15 - ಪರಿಶುದ್ದ ಬೈಬಲ್‌

15 ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:15
9 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು.


ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.


ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು