Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:17 - ಪರಿಶುದ್ದ ಬೈಬಲ್‌

17 ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:17
27 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.


ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.


ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು. ಬಲಿಷ್ಠ ನಗರಗಳ ಬಲಶಾಲಿಗಳು ನಿನಗೆ ಭಯಪಡುವರು.


ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.


ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.


ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು