ಮೀಕ 7:18 - ಪರಿಶುದ್ದ ಬೈಬಲ್18 ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.