ಮೀಕ 7:2 - ಪರಿಶುದ್ದ ಬೈಬಲ್2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಅಧ್ಯಾಯವನ್ನು ನೋಡಿ |
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.