3 ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.
3 ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
3 ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.
3 ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
3 ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.
ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ.
ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಯೆಹೂದ, ನೀನು ಹಾಗೆ ಹೇಳಿದರೂ, ನಿನ್ನಿಂದಾದಷ್ಟು ಕೆಡುಕನ್ನು ಮಾಡುತ್ತಿರುವೆ.”
ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.
ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.
ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’
ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.
ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ, ನೀವು ಹಾದುಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.
ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.