Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:4 - ಪರಿಶುದ್ದ ಬೈಬಲ್‌

4 ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:4
16 ತಿಳಿವುಗಳ ಹೋಲಿಕೆ  

ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು