ಮೀಕ 7:6 - ಪರಿಶುದ್ದ ಬೈಬಲ್6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.