ಯಾಕೋಬನು 1:10 - ಪರಿಶುದ್ದ ಬೈಬಲ್10 ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮೊಟೊ ಸಾವ್ಕಾರ್‍ಕಿವಂತ್ ಭಾವ್ ಅಪ್ನಿ ಕಿಳ್ ಸ್ಥಿತಿಕ್ ಯೆಲೊ ಮನುನ್ ಖುಶಿ ಹೊಂವ್ದಿತ್, ಕಶ್ಯಾಕ್ ಮಟ್ಲ್ಯಾರ್, ಮೊಟೊ ಸಾವ್ಕಾರ್‍ಕಿವಂತ್ ಮಾನುಸ್ ಗವ್ತಾಚ್ಯಾ ಫುಲ್ಲಾ ಸಾರ್ಕೊ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.