ಯಾಕೋಬನು 1:22 - ಪರಿಶುದ್ದ ಬೈಬಲ್22 ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ ತುಮಿ ದೆವಾಚ್ಯಾ ಗೊಸ್ಟಿ ಸಾರ್ಕೆ ಚಲ್ತಲೆ ಹೊವ್ನ್ ರ್‍ಹಾವಾ, ತೆ ಆಯಿಕ್ತಲೆ ಯೆವ್ಡೆಚ್ ಹೊವ್ನ್ ತುಮ್ಕಾಚ್ ತುಮಿ ಪಸ್ವುನ್ ಘೆವ್‍ನಕಾಸಿ. ಅಧ್ಯಾಯವನ್ನು ನೋಡಿ |
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!