ಯಾಕೋಬನು 1:3 - ಪರಿಶುದ್ದ ಬೈಬಲ್3 ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ತಿ ತರಾಸಾ ತುಮ್ಚೊ ವಿಶ್ವಾಸ್ ಪರಿಕ್ಷಾ ಕರುಕ್ ಯೆಲಾತ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತಿ ತರಾಸಾ ತುಮ್ಕಾ ಸೊಸುನ್ ಘೆತಲೆ ಯೆಯ್ ಸಾರ್ಕೆ ಕರ್ತಾತ್. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.