Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:7 - ಪರಿಶುದ್ದ ಬೈಬಲ್‌

7-8 ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೊ ಮಾನುಸ್ ಅಪ್ನಾಕ್ ಧನಿಯಾಕ್ನಾ ಕಾಯ್ತರ್‍ಬಿ ಗಾವ್ತಲೆ ಮನುನ್ ಚಿಂತಿನಸ್ತಾನಾ ರ್‍ಹಾಂವ್ದಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:7
7 ತಿಳಿವುಗಳ ಹೋಲಿಕೆ  

ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು