ಯಾಕೋಬನು 2:1 - ಪರಿಶುದ್ದ ಬೈಬಲ್1 ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಹಿಮೆನ್ ಭರಲ್ಲ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವರ್ತಿ ತುಮಿ ವಿಶ್ವಾಸ್ ಥವಲ್ಲ್ಯಾನು, ತುಮ್ಚ್ಯಾ ಮದ್ದಿ ಪಕ್ಷಪಾತ್ ರ್‍ಹಾವ್ಚೆ ನ್ಹಯ್. ಅಧ್ಯಾಯವನ್ನು ನೋಡಿ |
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.