ಯಾಕೋಬನು 2:13 - ಪರಿಶುದ್ದ ಬೈಬಲ್13 ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಕಶ್ಯಾಕ್ ಮಟ್ಲ್ಯಾರ್ ದಯಾ ದಾಕ್ವು ನಸಲ್ಲ್ಯಾಕ್ ದವ್‌ಬಿ ದಯಾ ದಾಕ್ವಿನಾ, ದಯಾ ದಾಕ್ವಿನಸಲ್ಲ್ಯಾ ಮಾನ್ಸಾಚಿ ಝಡ್ತಿ ಕರ್ತಾನಾ, ದೆವ್ ದಯಾ ದಾಕ್ವಿನಾ. ದಯಾ ನ್ಯಾಯ್ ತಿರ್ಮಾನಾಚ್ಯಾ ವರ್ತಿ ಇಬೆ ಹಾಯ್. ಅಧ್ಯಾಯವನ್ನು ನೋಡಿ |
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.