Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:17 - ಪರಿಶುದ್ದ ಬೈಬಲ್‌

17 ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ತನ್ನಲ್ಲಿ ಜೀವವಿಲ್ಲದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಸೆ ಕಾಮಾಂಚ್ಯಾ ವೈನಾ ದಾಕ್ವಿನಸಲ್ಲೊ ವಿಶ್ವಾಸ್ ಜಿವ್ ನಸಲ್ಲ್ಯಾ ಸಾರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:17
9 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು