Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚ್ಯಾ ಕಾಮಾಚ್ಯಾ ವೈನಾ ತೆಚೊ ವಿಶ್ವಾಸ್ ದಿಸುನ್ ಯೆಲೊ ಮನುನ್ ತಿಯಾ ಬಗ್ಲೆಯ್ ಅನಿ ವಿಶ್ವಾಸ್ ಕಾಮಾಂಚ್ಯಾ ವೈನಾ ಪುರಾ ಹೊಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:22
8 ತಿಳಿವುಗಳ ಹೋಲಿಕೆ  

ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.


ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು