Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:24 - ಪರಿಶುದ್ದ ಬೈಬಲ್‌

24 ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯನು ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೇ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಸೆ ಎಕ್ ಮಾನುಸ್ ವಿಶ್ವಾಸಾಚ್ಯಾ ವೈನಾ ಯವ್ಡೆಚ್ ನ್ಹಯ್, ಕಾಮಾಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊತಾ ಮನ್ತಲೆ ತುಮಿ ಬಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:24
6 ತಿಳಿವುಗಳ ಹೋಲಿಕೆ  

ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.


ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು