ಯಾಕೋಬನು 2:25 - ಪರಿಶುದ್ದ ಬೈಬಲ್25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್? ಅಧ್ಯಾಯವನ್ನು ನೋಡಿ |
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”