Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:5 - ಪರಿಶುದ್ದ ಬೈಬಲ್‌

5 ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್ ಹ್ಯಾ ಜಗಾತ್ ಹ್ಯಾ ಗರಿಬಾಕ್ನಿ ವಿಶ್ವಾಸಾತ್ ಸಾವ್ಕಾರ್ ಹೊವ್ಕ್ ಸಾಟ್ನಿ ಅನಿ ಅಪ್ನಾಚೊ ಪ್ರೆಮ್ ಕರ್ತಲ್ಯಾಚ್ಯಾ ಸಾಟ್ನಿ ತೆನಿ ಗೊಸ್ಟ್ ದಿವ್ನ್ ಸಾಂಗಲ್ಲ್ಯಾ ರಾಜಾಚೊ ವಾರಿಸ್ದಾರ್ ಹೊವ್ಕ್ ಸಾಟ್ನಿ ಮನುನ್ ತೆನಿ ತೆಂಕಾ ಎಚುನ್ ಕಾಡಲ್ಲೆ ಹಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:5
54 ತಿಳಿವುಗಳ ಹೋಲಿಕೆ  

“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


“ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.


ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


“ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.


ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಈ ವಿಷಯದಲ್ಲಿ ನೀವು ಮೋಸಹೋಗಬೇಡಿರಿ.


ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.


ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!


ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.


ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.


ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.


ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ ಸ್ಪಷ್ಟವಾಗಿ ಕಾಣಮಾಡುತ್ತವೆ. ಹಗಲುಬೆಳಕು ಭೂಮಿಗೆ ಬಂದಾಗ ಆ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. ಆ ಸ್ಥಳಗಳು ಮುದ್ರೆಯೊತ್ತಿದ ಜೇಡಿಮಣ್ಣಿನಂತೆ ರೂಪಗೊಳ್ಳುತ್ತವೆ.


ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು