Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:6 - ಪರಿಶುದ್ದ ಬೈಬಲ್‌

6 ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ತ್ಯಾ ಗರಿಬಾಕ್ನಿ ಮಾನ್ ದಿಲ್ಲ್ಯಾಸಿ ನಾ ಸಾವ್ಕಾರ್ ಲೊಕಾ ತುಮ್ಕಾ ತುಡ್ವುತಾತ್ ಅನಿ ವೊಡುನ್ ಚವ್ಕಸಿ ಕರ್ತಲ್ಯಾ ಜಾಗ್ಯಾಕ್ ನ್ಹೆತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:6
38 ತಿಳಿವುಗಳ ಹೋಲಿಕೆ  

ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ವಿಧವೆಯರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡುಮಾಡಬೇಡಿ. ಒಬ್ಬರಿಗೊಬ್ಬರು ಕೇಡುಮಾಡಲು ಯೋಚಿಸಲೂಬೇಡಿ!’”


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ಆ ದುಷ್ಟರು ಕುಗ್ಗಿಹೋದವರನ್ನು ಮತ್ತೆಮತ್ತೆ ಜಜ್ಜಿಹಾಕುವರು.


ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು.


ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.


ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.


ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.


ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.


ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು