ಯಾಕೋಬನು 2:8 - ಪರಿಶುದ್ದ ಬೈಬಲ್8 ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಿಯಾ ತುಜೊಚ್ ಪ್ರೆಮ್ ಕರಲ್ಲ್ಯಾ ಸಾರ್ಕೆ, ಸೆಜಾರ್‍ಯಾಚೊಬಿ ಪ್ರೆಮ್ ಕರ್. ಮನ್ತಲ್ಯಾ ಪವಿತ್ರ್ ಪುಸ್ತಕಾತ್ಲ್ಯಾ ಹುಕುಮಾ ಸಾರ್ಕೆ ಖಾಲ್ತಿ ಹೊವ್ನ್ ಚಲುಕ್ ಲಾಗ್ಲ್ಯಾಶಿ ಜಾಲ್ಯಾರ್, ತುಮಿ ಸಮಾ ಹೊತ್ತೆಚ್ ಕರುಕ್ ಲಾಗ್ಲ್ಯಾಸಿ. ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!