ಯಾಕೋಬನು 3:13 - ಪರಿಶುದ್ದ ಬೈಬಲ್13 ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮ್ಚ್ಯಾ ಮದ್ದಿ ಬುದ್ವಂತಾ ಅನಿ ಕಳಲ್ಲಿ ಲೊಕಾ ಹಾತ್ ಕಾಯ್? ತೆನಿ ಖರಿ ಕಾಮಾ ಕರ್ತಲ್ಯಾ ವೈನಾ ತೆ ದಾಕ್ವುನ್ ದಿಂವ್ದಿತ್. ತೆನಿ ಸಾದೆಪಾನಾನ್ ಕರಲ್ಲ್ಯಾ ಬರ್ಯಾ ಕಾಮಾಚ್ಯಾ ವೈನಾ ಬುದ್ದ್ ಉತ್ಪನ್ ಹೊತಾ. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.