Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:15 - ಪರಿಶುದ್ದ ಬೈಬಲ್‌

15 ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧವಾದದ್ದು, ಪ್ರಾಕೃತ ಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಸ್ಲಿ ಬುದ್ದ್ ಸರ್ಗಾ ವೈನಾ ಯೆಲ್ಲಿ ನ್ಹಯ್, ತಿ ಬುದ್ದ್ ಶಾರಾಕ್ ಅನಿ ಹ್ಯಾ ಜಗಾಕ್ ಸಮಂದ್ ಪಡಲ್ಲಿ ಸ್ವಾಭಾವಿಕ್ ಅನಿ ಮ್ಹಾರ್ವಾಂಚ್ಯಾಕ್ನಾ ಯೆಲ್ಲಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:15
30 ತಿಳಿವುಗಳ ಹೋಲಿಕೆ  

ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.


ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು