Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:16 - ಪರಿಶುದ್ದ ಬೈಬಲ್‌

16 ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖೈ ಇರ್ಸ್ಯಾ ಅನಿ ಖುದ್ಗೆಪಾನ್ ರ್‍ಹಾತಾ, ಥೈ ಗೊಂದಳ್ ಅನಿ ಸಗ್ಳ್ಯಾ ನಮನ್ಯಾಚೆ ಬುರ್ಶೆಪಾನ್‌ಬಿ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:16
11 ತಿಳಿವುಗಳ ಹೋಲಿಕೆ  

ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.


ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು